PDIT: 10/11/2022. ಗುರುವಾರ:
ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯವಶ್ಯ ಎಂದು ಹೊಸಪೇಟೆಯ ಗೌರವಾನ್ವಿತ ೩ ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ್ ನಂದಗುಡಿ ಅವರು ಅಭಿಪ್ರಾಯ ಪಟ್ಟರು.
ಅವರು ಹೊಸಪೇಟೆಯ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ ೧೦-೧೧-೨೦೨೨ ಗುರುವಾರದಂದು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾನೂನು ಸೇವಾಸಮಿತಿಯು ಯಾವುದೇ ನಾಗರೀಕರಿಗೆ ಉಚಿತವಾಗಿ ಕಾನೂನು ಸಲಹೆಗಳನ್ನು ಒದಗಿಸುವಲ್ಲಿ ಹಾಗೂ ಆರ್ಥಿಕ ಹಾಗೂ ಸಾಮಾಜಿಕ ಬೆಂಬಲವಿಲ್ಲದವರಿಗೆ ನ್ಯಾಯವಾದಿಗಳನ್ನು ಉಚಿತವಾಗಿ ನೇಮಿಸಿ ಸಹಾಯ ಮಾಡುತ್ತದೆ. ಇದರ ಅರಿವನ್ನು ಯುವ ಜನರು ತಿಳಿದು ಸಮಾಜಕ್ಕೂ ಅರಿವು ಮೂಡಿಸಲು ನೆರವಾಗಬೇಕು ಎಂದು ಅವರು ತಿಳಿಸಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕರುಣಾನಿಧಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ವಿವಿಧ ಹಂತಗಳ ನ್ಯಾಯಾಲಯಗಳಲ್ಲಿ ಲಭ್ಯವಿರುವ ಕಾನೂನು ಸೇವೆಗಳು ಹಾಗೂ ಅವುಗಳನ್ನು ಪಡೆಯುವ ರೀತಿಯನ್ನು ವಿವರಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಕಾನೂನು ಸೇವೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ರಮೇಶ್ ಬಾಬು ಬಿಎನ್, ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಕಿಶನ್ ಬಿ ಮಾಡಲಗಿ, ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ತೃಪ್ತಿ ಧರಣಿ, ವಕೀಲರ ಸಂಘದ ಅಧ್ಯಕ್ಷರು ಕೆವಿ ಬಸವರಾಜ ಉಪಸ್ಥಿತರಿದ್ದರು.
ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷ ಪಲ್ಲೇದ ದೊಡ್ಡಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಡಿಐಟಿ ಪ್ರಾಚಾರ್ಯ ಡಾ.ಎಸ್.ಎಂ.ಶಶಿಧರ್ ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಿದರು. ಕು.ಸೌಮ್ಯ, ಕು.ಸಂಗೀತ ಹಾಗೂ ಕು.ಸಹನಾ ಪ್ರಾರ್ಥನೆ ಗೀತೆಯನ್ನು ಹಾಡಿದರು. ಪ್ರೊ. ಆರ್. ಬಸವರಾಜ್ ನಿರೂಪಣೆ ಮಾಡಿದರು.ಪ್ರೊ ರವಿ ಕುಮಾರ್ ವಂದನಾರ್ಪಣೆ ಸಲ್ಲಿಸಿದರು. ವಿವಿಧ ವಿಭಾಗದ ಅಧ್ಯಾಪಕರು ಹಾಗೂ ೨೦೦ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.